ಇದೇ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಒಂದು ತಿಂಗಳಲ್ಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ರಾಜ್ಯದಲ್ಲಿ ಏಪ್ರಿಲ್ ಮಧ್ಯದಲ್ಲಿ ಅಥವಾ ಮೇ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕಳೆದ ವರ್ಷ ಡಿಸೆಂಬರ್ 30 ಮತ್ತು 31 ರಂದು ಅಮಿತ್ ಶಾ ಮಂಡ್ಯ ಜಿಲ್ಲೆ ಮತ್ತು ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ಬಾರಿ ಕಿತ್ತೂರು ಕರ್ನಾಟಕ ಪ್ರದೇಶ ಎಂದೂ ಕರೆಯಲ್ಪಡುವ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.
27 ರಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮಿಸಲಿದ್ದು, 28 ರಂದು ಬೆಳಗ್ಗೆ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಕಾಲೇಜಿನ 75ನೇ ವಾರ್ಷಿಕೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆಯ ಎರಡು ಕಾರ್ಯಕ್ರಮಗಳಲ್ಲಿ ಹಾಜರಾಗಲಿದ್ದಾರೆ.
ಕುಂದಗೋಳದ ನಡೆಯುವ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿ ನಗರದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ವಾರ್ಡ ನಂ. 7 ರ ಮತಗಟ್ಟೆ ಸಂಖ್ಯೆ 50 ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ನಂತರ ಧಾರವಾಡ ಗ್ರಾಮಾಂತರ ವ್ಯಾಪ್ತಿಗೆ ಬರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಭಾಗದಲ್ಲಿ ಸುಮಾರು 1.5 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ 57 ಎಕರೆ ಜಾಗದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆಯನ್ನು ಅಮಿತ್ ಶಾ ನೆರವೇರಿಸಲಿದ್ದಾರೆ.
ಬಳಿಕ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಭಾಗವಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಕುಂದಗೋಳದಿಂದ ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ಎಂಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.
ತಿಳಿಸಿವೆ
ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಖಾನಾಪುರ ಮತ್ತು ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳಿಗೂ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುವ ನಿರೀಕ್ಷೆಯಿದೆ. ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಬೆಳಗಾವಿಯಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಜನವರಿ 28ರಂದು ಸಂಜೆ 6.30 ರಿಂದ 10 ಗಂಟೆಯ ತನಕ ಬೆಳಗಾವಿಯಲ್ಲಿ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ರಾಜಕೀಯ ಚಾಣಕ್ಷ್ಯ ಅಮಿತ್ ಶಾ ಇಂದು ಕಿತ್ತೂರು ಕರ್ನಾಟಕದಲ್ಲಿ2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದ್ದು. ವಿಧಾನ ಸಭಾ ಚುನಾವಣೆ ರಂಗರತೊಡಗಿದ್ದು. ಈಗಾಗಲೇ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಇಂದು ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಬರುತ್ತಿದ್ದಾರೆ.
ನಾಳೆ ಕಿತ್ತೂರಿನಲ್ಲಿ ಅಮಿತ್ ಶಾ ಅವರ ಹೈವೋಲ್ಟೇಜ್ ಕಾರ್ಯಕ್ರಮ ನಡೆಯಲಿದ್ದು. 4 ವಿಧಾನಸಭಾ ಕ್ಷೇತ್ರಗಳಿಂದ "ಶಾ" ಮೆಚ್ಚಿಸಲು 1 ಲಕ್ಷಕ್ಕೂ ಅಧಿಕ ಜನಸ್ತೋಮ ಸೇರಿಸಲು ಬೆಳಗಾವಿ ಜಿಲ್ಲಾ ಬಿಜೆಪಿ ತೆರೆಮರೆಯ ಕಸರತ್ತು ಕೂಡ ನಡೆಸಿದೆ.
ಇನ್ನೂ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿರುವ ಅಮಿತ್ ಶಾ ಬಿಜೆಪಿಯ ಸ್ಟಾರ್ ಪ್ರಚಾರಕ ಕೂಡಾ ಹೌದು. ನಾಳೆ ಕಿತ್ತೂರಿನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕ್ರಮ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಿ ಮಾರ್ಪಡುವುದರಲ್ಲಿ ಅನುಮಾನವೇ ಇಲ್ಲ.
ಹಾಗೆ ಅಮಿತ್ ಶಾ ಅವರು ಭಾಷಣ ಮಾಡುವಾಗ ಬಿಜೆಪಿಯ ಸಾಧನೆಯ ರಿಪೋರ್ಟ್ ಕಾರ್ಡುಗಳನ್ನು ಜನತೆಯ ಮುಂದಿಡುವ ಸಾಧ್ಯತೆಗಳಿದ್ದು. ಜನತೆ ಅದನ್ನ ಯಾವ ರೀತಿ ಸ್ವೀಕರಿಸಿ ಮುಂದಿನ ಚುನಾವಣೆನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಣತಂತ್ರ ವ್ಯವಸ್ಥೆಗೆ ಉತ್ತರಿಸುತ್ತಾರೆ ಎಂಬ ಗೊಂದಲವು ಬಿಜೆಪಿ ಪಾಳ್ಯದಲ್ಲಿ ಹರಿದಾಡುತ್ತಿದೆ.
ಒಟ್ಟಿನಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಯಾಗಿರುವ ಇಂದಿನ ಕಾರ್ಯಕ್ರಮ ಬಿಜೆಪಿ ಪಾಳ್ಯದಲ್ಲಿ ಹರ್ಷ ಉಂಟು ಮಾಡಿದೆ
0 Comments