ರಾಜ್ಯ ಮಟ್ಟದ "ಕೃಷಿ ಪಂಡಿತ" ಪುರಸ್ಕೃತ ಡಾ.ಎ.ಸಿ.ದಾನಪ್ಪ
ಕಂಪ್ಲಿ ತಾಲೂಕಿನಲ್ಲಿ ಹಲವಾರು ಸಮಾಜಿಕ, ಧಾರ್ಮಿಕ, ಸಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ಡಾ.ಎ.ಸಿ.ದಾನಪ್ಪ ರವರು ಈಗ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ.
ರಾಜ್ಯ ಮಟ್ಟದ "ಕೃಷಿ ಪಂಡಿತ" ಪ್ರಶಸ್ತಿ ಪುರಸ್ಕಾರವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಕೃಷಿಯಲ್ಲಿ ವಿಶೇಷ ಸಾಧನೆಗೈದ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯಮಂತ್ರಿಗಳು ಕೃಷಿ ಇಲಾಖೆಯಿಂದ ನೀಡುವ ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿ ಪ್ರಶಸ್ತಿಗಳನ್ನು ಆಯ್ಕೆಯಾದ ರೈತರಿಗೆ ವಿತರಿಸಿದರು ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷಿ ಇಲಾಖೆಯ ಯೋಜನೆಗಳನ್ನು ಮತ್ತು ಫಲಾನುಭವಿಗಳಿಗೆ ವಿತರಿಸಿದ ಸೌಲಭ್ಯಗಳ ಕುರಿತು ವಿವರಿಸಿದರು.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ಸತತವಾಗಿ ಕೃಷಿಯಲ್ಲಿ ಹಲವಾರು ಸಂಸ್ಥೆಗಳಿಂದ ಪ್ರಶಸ್ತಿ ಪಡೆದ ಡಾ.ಎ.ಸಿ.ದಾನಪ್ಪ ಅವರು ಈಗ ಕರ್ನಾಟಕ ಸರ್ಕಾರದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪಡೆದು ತಾಲೂಕಿನ ಹಲವಾರು ರೈತರಿಗೆ ಮಾರ್ಗದರ್ಶಕರಾಗಿದ್ದಾರೆ. ಇನ್ನೂ ದಾನಪ್ಪರವರು ಹೆಚ್ಚಿನ ಮಟ್ಟದಲ್ಲಿ ಪ್ರಶಸ್ತಿ ಪಡೆದು ಜಿಲ್ಲೆಯ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿ ಹಾಗೂ ಯುವ ರೈತರಿಗೆ ಸೂರ್ತಿಯಾಗಲಿ ಎಂದು ಆಶಿಸುತ್ತೆವೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಮೃತ ದೇಸಾಯಿ ವಹಿಸಿದ್ದರು. ವೇದಿಕೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕ ಅರವಿಂದ ಬೆಲ್ಲದ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷ ರಾಜೇಶ ಕೋಟೆನ್ನವರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಸವರಾಜ ಕುಂದಗೋಳ, ಭಾರತ ಸರ್ಕಾರದ ಮಳೆಯಾಶ್ರೀತ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಅಶೋಕ ದಳವಾಯಿ, ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ: ಪಿ.ಎಲ್. ಪಾಟೀಲ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ: ಎಂ.ವ್ಹಿ. ವೆಂಕಟೇಶ, ಕೃಷಿ ಆಯುಕ್ತ ಶರತ್ ಬಿ., ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಬಿ.ವೈ. ಶ್ರೀನಿವಾಸ, ಕೃಷಿ ನಿರ್ದೇಶಕ ಡಾ; ಜೆ.ಟಿ. ಪುತ್ರ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಸ್ವಾಗತಿಸಿದರು.



0 Comments