Belagavi :ಜೆಡಿಎಸ್‌ಗೆ ಮತ್ತೊಂದು ಶಾಕ್! ಅಂತಿಮ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಇನ್ನೋರ್ವ ಅಭ್ಯರ್ಥಿ


ಜೆಡಿಎಸ್‌ಗೆ ಮತ್ತೊಂದು ಶಾಕ್! ಅಂತಿಮ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಇನ್ನೋರ್ವ ಅಭ್ಯರ್ಥಿ

*******************************

 ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದಿರುವುದು ಸುದ್ದಿಯಲ್ಲಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ಪಕ್ಷದ ನಾಯಕರಿಗೆ ತಿಳಿಸದೆ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್​‌ಗೆ ಬೆಂಬಲ ಸೂಚಿಸಿದ್ದಾರೆ. ಇದರೊಂದಿಗೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ 

ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಜೆಡಿಎಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ.

Post a Comment

0 Comments