Crime : ಬೆಳಗಾವಿ: ಬಸ್ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್ ನೇಣಿಗೆ ಶರಣು

ಚಿಕ್ಕೋಡಿ (ಆ.09): ಬೆಳಗಾವಿ ಜಿಲ್ಲೆಯ ರಾಯಬಾಗ ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ ಭಜಂತ್ರಿ (48) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಬಾಗ ಬಸ್ ನಿಲ್ದಾಣದ ಕಟ್ಟಡದ ಮೊದಲ ಮಹಡಿಯಲ್ಲಿಯೇ ಕಿಟಕಿಗೆ ಹಗ್ಗ ಕಟ್ಟಿ ನೇಣಿಗೆ ಶರಣಾಗಿದ್ದು, ಇಂದು ಬೆಳಗ್ಗೆ ಎಂದಿನಂತೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಠಾಣೆ ಬಳಿಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ವ್ಯಕ್ತಿಯೊಬ್ಬರ ಕಿರುಕುಳದಿಂದ ನೊಂದಿದ್ದ ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆ ಸಮೀಪವೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಮಾಯಕೊಂಡ ಹೋಬಳಿಯ ಬೊಮ್ಮೇನಹಳ್ಳಿ ತಾಂಡಾ ವಾಸಿ ರವಿನಾಯ್ಕ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ. ತಮ್ಮದೇ ತಾಂಡಾದ ವ್ಯಕ್ತಿಯೊಬ್ಬ ಕಳೆದ 2-3 ವರ್ಷದಿಂದ ನೀಡುತ್ತಿದ್ದ ಕಿರುಕುಳದಿಂದ ರೋಸಿ ಹೋಗಿದ್ದ ರವಿನಾಯ್ಕ ಈ ಬಗ್ಗೆ ಮಾಯಕೊಂಡ ಪೊಲೀಸ್‌ ಠಾಣೆಗೆ ಪತ್ನಿ ಸಮೇತ ಬಂದಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. 

Post a Comment

0 Comments