ಬೆಳಗಾವಿ (ಆ.12): ನನ್ನ ಹತ್ತಿರ ಪೆನ್‌ಡ್ರೈವ್ ಇರೋದು ಕಟುಸತ್ಯ. ನನ್ನ ಮೇಲೆ ಒತ್ತಡ ಹೆಚ್ಚಾಗಲಿ ಎಂದು ಕಾಯುತ್ತಿದ್ದು, ಸಂದರ್ಭ ಬಂದಾಗ ರಿಲೀಸ್ ಮಾಡುವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಪುನರುಚ್ಚರಿಸಿದರು. ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ, ಸಂದರ್ಭ ಬಂದಾಗ ಪೆನ್‌ಡ್ರೈವ್ ಬಿಡುಗಡೆ ಮಾಡುವೆ. ನನ್ನ ಮೇಲೆ ಒತ್ತಡ ಹೆಚ್ಚಾಗಲಿ ಎಂದು ಕಾಯುತ್ತಿರುವೆ. ಪೆನ್‌ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುವುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ ಎಂದರು.
ಅಥಣಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿ ಕುರಿತು ಕ್ರೆಡಿಟ್ ವಾರ್ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಣ ಬಿಡುಗಡೆ ಮಾಡಿದ್ದು ಬಿಜೆಪಿ ಎಂದಿದ್ದ ಮಹೇಶ ಕುಮಟಳ್ಳಿಗೆ ತಿರುಗೇಟು ನೀಡಿದ ಸವದಿ ಅವರು, ಇತಿಹಾಸ ಗೊತ್ತಿಲ್ಲದವರಿಗೆ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ಅನುಭವ ಕೊರತೆಯಿಂದ ಮಹೇಶ ಕುಮಟಳ್ಳಿ ಹೀಗೆ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪಶುವೈದ್ಯಕೀಯ ಕಾಲೇಜಿಗೆ ಹಣ ಬಿಡುಗಡೆ ಮಾಡಿದ್ದಾರೆ. ಈ ಸಂಗತಿ ಮಹೇಶ ಕುಮಟಳ್ಳಿಗೆ ಗೊತ್ತಿಲ್ಲ ಎಂದು ತಿಳಿಸಿದರು.
0 Comments