Viral : ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಹೆಣಕ್ಕೆ ಬಳಸುವ ಉಪ್ಪು ಕೈದಿಗಳ ಆಹಾರಕ್ಕೆ?: ವಿಡಿಯೋ ವೈರಲ್‌

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಹೆಣಕ್ಕೆ ಬಳಸುವ ಉಪ್ಪು ಕೈದಿಗಳ ಆಹಾರಕ್ಕೆ?: ವಿಡಿಯೋ ವೈರಲ್‌

ಹೆಣಕ್ಕೆ ಹಾಕುವ ಉಪ್ಪುನ್ನೇ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಆಹಾರಕ್ಕೆ ಉಪಯೋಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.

ಬೆಳಗಾವಿ (ಆ.28): ಹೆಣಕ್ಕೆ ಹಾಕುವ ಉಪ್ಪುನ್ನೇ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಆಹಾರಕ್ಕೆ ಉಪಯೋಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ. ಸದಾ ಒಂದಿಲ್ಲೊಂದು ಅಕ್ರಮ ಚಟುವಟಿಕೆಗಳ ಮೂಲಕ ಹೆಸರು ಕೆಡಿಸಿಕೊಳ್ಳುತ್ತಿರುವ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಅಡುಗೆಗೆ ಮೃತದೇಹಕ್ಕೆ ಉಪಯೋಗಿಸುವ ಉಪ್ಪನ್ನು ಬಳಸುತ್ತಿದೆಯಂತೆ!? ಈ ಕುರಿತು ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿಯೋರ್ವ ವಿಡಿಯೋ ಮಾಡಿ ಹರಿಬಿಟ್ಟಿರುವುದು ಸದ್ಯ ಚರ್ಚಿತ ಪ್ರಕರಣವಾಗಿದೆ.

ಅಂತ್ಯಕ್ರಿಯೆ ಹಾಗೂ ಮರಣೋತ್ತರ ಪರೀಕ್ಷೆ ವೇಳೆ ಮೃತದೇಹ ಬೇಗ ಹಾಳಾಗಬಾರದು ಎಂಬ ಕಾರಣಕ್ಕೆ ಹಾಗೂ ಹೆಣವನ್ನು ಸಂರಕ್ಷಿಸಿಡಲು ಕ್ರಿಸ್ಟಲ್‌ ಉಪ್ಪನ್ನು ಬಳಕೆ ಮಾಡಲಾಗುತ್ತದೆ. ಸದ್ಯ ಹಿಂಡಲಗಾ ಜೈಲಿನ ಕೈದಿಗಳ ಆಹಾರಕ್ಕೂ ಇದೇ ಉಪ್ಪು ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ. ಉಪ್ಪಿನ ಪ್ಯಾಕೆಟ್‌ ಮೇಲೆ ಈ ಉಪ್ಪನ್ನು ಆಹಾರವಾಗಿ ಬಳಸಲು ನಿಷೇಧಿಸಲಾಗಿದೆ. ಇದನ್ನು ಸಂರಕ್ಷಣೆಯ ಸಾಧನವಾಗಿ ಮಾತ್ರ ಬಳಸಬೇಕು ಎಂಬ ಎಚ್ಚರಿಕೆಯ ಬರಹವನ್ನು ದೊಡ್ಡ ಅಕ್ಷರಗಳಲ್ಲಿಯೇ ನಮೂದಿಸಲಾಗಿದೆ. ಹಾಗಿದ್ದರೂ ಕೈದಿಗಳಿಗೆ ಮಾತ್ರ ಇದೇ ಉಪ್ಪನ್ನು ನೀಡಲಾಗುತ್ತಿದೆ. ಈ ಉಪ್ಪು ಆಯೋಡಿನ್‌ ರಹಿತವಾಗಿದ್ದು, ಇದೇ ಉಪ್ಪನ್ನು ಸೇವಿಸಬೇಕಾದ ಅನಿವಾರ್ಯತೆ ಕೈದಿಗಳಿಗೆ ಎದುರಾಗಿದೆ.

Post a Comment

0 Comments