Belagavi : ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣ ಖಂಡಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಬಿವೈ ವಿಜಯೇಂದ್ರ

ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣ ಖಂಡಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಬಿವೈ ವಿಜಯೇಂದ್ರ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯು ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿರುವ ಅವರು, ಇದು ಇಢೀ ರಾಜ್ಯದ ಜನರು ತಲೆ ತಗ್ಗಿಸುವ ವಿಚಾರವಾಗಿದ್ದು ರಾಜ್ಯ ಸರ್ಕಾರ ಮಾತ್ರ ಲಘುವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈಲೈಟ್ಸ್‌:

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಇದು ಇಡೀ ರಾಜ್ಯದ ಜನ ತಲೆ ತಗ್ಗಿಸುವ ವಿಚಾರ, ಆದರೆ ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿದೆ ಎಂದು ವಿಜಯೇಂದ್ರ ತರಾಟೆ

ಆ ಮಹಿಳೆ ಸಹಾಯಕ್ಕೆ ಸರ್ಕಾರ ಯಾಕೆ ಇರಲಿಲ್ಲ ಎಂಬ ಕೋರ್ಟ್ ಹೇಳಿಕೆಯನ್ನು ಉಲ್ಲೇಖಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ

ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಕಳೆದ ವಾರ ಬೆಳಗಾವಿ ಗ್ರಾಮಾಂತರ ವಂಟಮೂರಿ ವಿಷಯ ದೇಶಾದ್ಯಂತ ಚರ್ಚೆ ಆಗಿದೆ. ಒಬ್ಬ ಮಹಿಳೆಯನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲೇ ಘಟನೆ ನಡೆದಿದೆ ಎಂದರು.

ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಿದೆನಾನು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಬಂದಿದ್ದೇನೆ. ಗೃಹ ಮಂತ್ರಿಗಳು ಭೇಟಿ ನೀಡಿದ್ದಾರೆ. ಆದರೆ ಇಡೀ ರಾಜ್ಯದ ಜನ ತಲೆ ತಗ್ಗಿಸುವ ಘಟನೆ ಇದಾಗಿದೆ. ಈ ಸಂಬಂಧ ಆರು ಮಂದಿಯ ಬಂಧನವೂ ಆಗಿದೆ. ಆದರೆ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Post a Comment

0 Comments