ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ
ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಘೋಷಿಸಿದ್ದಾರೆ.
ಚಳಿಗಾಲ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಮಾತನಾಡುತ್ತಿದ್ದ ಮುಖ್ಯಮಂತ್ರಿ, ಈ ಬಾರಿ ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.
ಬಡ್ಡಿ ಒಟ್ಟು 300 ಕೋಟಿಯಷ್ಟು ಇರಬಹುದು. ಅದನ್ನು ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ರೈತರ ಬಡ್ಡಿ ಮನ್ನಾ ಘೋಷಣೆಗೆ ಮಾಜಿ ಸಹಕಾರ ಸಚಿವ ಶಾಸಕ ಎಸ್‌ಟಿ ಸೋಮಶೇಖರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.
0 Comments