ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಆರೋಗ್ಯದಲ್ಲಿ ಇಂದು ಏರುಪೇರಾಗಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಿಸಲಾಗಿತ್ತು. ಅಷ್ಟರೊಳಗೆ ಲೀಲಾವತಿ ನಿಧನರಾಗಿದ್ದಾರೆ. ಆದರೆ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಂತೆ ವಿನೋದ್ ರಾಜ್‌ಗೆ ತಾಯಿಯ ಪರಿಸ್ಥಿತಿ ನೋಡಿ ಅಸ್ವಸ್ಥಗೊಂಡಿದ್ದಾರೆ.
85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದವರಾಗಿರುವ ಲೀಲಾವತಿ ಯಾರ ನೆರವೂ ಇಲ್ಲದೆ, ಯಾವುದೇ ಬೆಂಬಲ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಅತೀ ದೊಡ್ಡ ಹೆಸರು ಮಾಡಿದ ನಟಿ. ರಂಗಭೂಮಿಯಿಂದ ಬಂದು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಎಲ್ಲಾ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಇತ್ತೀಚಗಷ್ಟೇ ಜೀವಮಾನ ಶ್ರೇಷ್ಠ ಸಾಧನೆಗಾಗಿ ನಂದಿ ಪ್ರಶಸ್ತಿ ಪಡೆದುಕೊಂಡ ನಟಿ ಲೀಲಾವತಿ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲೀಲಾವತಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

0 Comments