ಲೋಕಸಭಾ ಚುನಾವಣೆಗೆ
ಅಭ್ಯರ್ಥಿಗಳ ಪಟ್ಟಿ ರಿಲೀಸ್?
ನವದೆಹಲಿ
ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ ಮಾಡುವ ಮುನ್ನವೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಬಿಜೆಪಿ ತೀರ್ಮಾನಿಸಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಎಲ್ಲಕ್ಕಿಂತಾ ಹೆಚ್ಚಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ನಾಮಬಲದಿಂದಲೇ ಗೆಲುವು ಸಾಧಿಸುವ ಉತ್ಸಾಹದಲ್ಲಿ ಬಿಜೆಪಿ ಅಭ್ಯರ್ಥಿಗಳು ಇದ್ದಾರೆ
ಇತ್ತೀಚೆಗಷ್ಟೇ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲೂ ಇದೇ ವಿಚಾರ ಪ್ರಸ್ತಾಪವಾಗಿತ್ತು. ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳ ಬಿಜೆಪಿ ಅಧ್ಯಕ್ಷರು ತಮ್ಮ ರಾಜ್ಯಗಳಲ್ಲಿ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಗೊಂದಲವಿಲ್ಲದೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದೇ ಗೆಲ್ಲಲು ಕಾರಣವಾಯ್ತು ಎಂದು ಅಭಿಪ್ರಾಯಪಟ್ಟಿದ್ದರು.
ಬಿಜೆಪಿ ಗೆಲುವು ಸಾಧಿಸಿದ ಮೂರೂ ರಾಜ್ಯಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಆದರೆ, ಬಿಜೆಪಿ ಆದಷ್ಟೂ ಬೇಗ ಟಿಕೆಟ್ ಘೋಷಣೆ ಮಾಡಿತ್ತು. ಈ ಪೈಕಿ ಬಿಜೆಪಿಯ ಮೊದಲ ಎರಡು ಪಟ್ಟಿಗಳಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿಗಳು ಆದಷ್ಟೂ ಗೆಲುವು ಸಾಧಿಸಿದ್ದಾರೆ. ಹೀಗಾಗಿ, ಲೋಕಸಭಾ ಚುನಾವಣೆಗೆ ಬಿಜೆಪಿ ಜನವರಿ ಅಂತ್ಯಕ್ಕೇ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ. ಇನ್ನು ಫೆಬ್ರವರಿ ಅಂತ್ಯಕ್ಕೆ ಅಥವಾ ಮಾರ್ಚ್‌ನಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ.
ಬಾರಿ ಕೆಲವು ರಾಜ್ಯಗಳಲ್ಲಿ ಪಕ್ಷದ ಜನಪ್ರಿಯ ಮುಖಗಳನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆಯೂ ಇದೆ. ವಿಧಾನಸಭಾ ಚುನಾವಣೆಗೆ ಸಂಸದರು ಸ್ಪರ್ಧೆ ಮಾಡಿದ ರೀತಿಯಲ್ಲೇ ಲೋಕಸಭಾ ಚುನಾವಣೆಗೆ ರಾಜ್ಯಸಭಾ ಸದಸ್ಯರು ಹಾಗೂ ಕೆಲವು ರಾಜ್ಯಗಳ ವಿಧಾನಸಭಾ ಸದಸ್ಯರು ಸ್ಪರ್ಧಿಸಿದರೂ ಅಚ್ಚರಿ ಏನಿಲ್ಲ
0 Comments