MK.vani ಸುದ್ದಿ ಬೆಂಗಳೂರು. ಮಾಧ್ಯಮ ಸೇವಾರತ್ನ ಪ್ರಶಸ್ತಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಚನ್ನಮ್ಮ ಕಿತ್ತೂರಿಗೆ.

'ಮಾಧ್ಯಮ ಸೇವಾರತ್ನ' ಪ್ರಶಸ್ತಿ

ಚನ್ನಮ್ಮನ ಕಿತ್ತೂರು: 2023ನೇ ಸಾಲಿನ ರಾಜ್ಯ ಮಟ್ಟದ ಕರ್ನಾಟಕ ಮಾಧ್ಯಮ ಸೇವಾ ರತ್ನ ಪ್ರಶಸ್ತಿಗೆ ಪಟ್ಟಣದ ಉದಯವಾಣಿ ದಿನಪತ್ರಿಕೆ ವರದಿಗಾರ ಬಸವರಾಜ್ ಚಿನಗುಡಿ ಪ್ ಹಾಗೂ ಅಂಕಣಕಾರ, ಪತ್ರಕರ್ತ ಪ್ರವೀಣ ಗಿರಿ ಭಾಜನರಾಗಿದ್ದಾರೆ. 

ಗ್ರಾಮೀಣ ಭಾಗದ ಜನರ ಹಲವಾರು ಸಮಸ್ಯೆಗಳನ್ನು ತಮ್ಮ ವಿಶೇಷ ಲೇಖನಗಳ ಮೂಲಕ ಸರಕಾರದ ಗಮನ ಸೆಳೆದು, ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕ ಮತ್ತು ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಡಿ.23 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದ್ದಾರೆ. 

ಪ್ರಶಸ್ತಿ ಪುರಸ್ಕೃತರನ್ನು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ, ಶಾಸಕ ಬಾಬಾಸಾಹೇಬ್ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡಗೌಡರ, ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

Post a Comment

0 Comments