ಎಂ.ಕೆ. ವಾಣಿ ಸುದ್ದಿ : ಮನರೇಗಾ ಯೋಜನೆಯಲ್ಲಿ ರೂ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಒಂದೇ ತಾಲೂಕಿನಲ್ಲಿ 32 ಜನ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
2020-21ಹಾಗೂ 2022-23 ರಲ್ಲಿ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಲೆಕ್ಕ ಪರಿಶೋಧನೆ ವೇಳೆ ಬಯಲಾಗಿತ್ತು. ಪ್ರಕರಣ ಸಂಬಂಧ ಕೆಲ ದಿನಗಳ ಹಿಂದೆ ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ಸಹ ದಾಖಲಾಗಿದ್ದು ನಾಲ್ಕು ಜನ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
ದೇವದುರ್ಗ ತಾಲ್ಲೂಕಿನ 33 ಗ್ರಾಮಪಂಚಾಯಿತಿಗಳಲ್ಲಿ ಅನುಷ್ಠಾನಗೊಂಡ ಒಟ್ಟು 5,385 ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದ್ದು ಸುಮಾರು 150 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಅಂತ ಸಾಮಾಜಿಕ ಪರಿಶೋಧನಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
ಇದೇ ಪ್ರಕರಣಕ್ಕೆ ಸಂಬಂಧ ದೇವದುರ್ಗ ತಾಲೂಕಿನ 32 ಜನ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡೇ ಆದೇಶ ಹೊರಡಿಸಿದ್ದಾರೆ.
0 Comments