Belagavi :ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ..ಬೆಳಗಾವಿ ಕುರಿತು ವಿವಾದಾತ್ಮಕ ಹೇಳಿಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ..ಬೆಳಗಾವಿ ಕುರಿತು ವಿವಾದಾತ್ಮಕ ಹೇಳಿಕೆ

ಭಾನುವಾರ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ 6ನೇ ಕನ್ನಡ ಸಮಾವೇಶದ ಸಮ್ಮೇಳನದಲ್ಲಿ ಸಚಿವರು ಭಾಗಿಯಾಗಿದ್ದರು

ಈ ಕಾರ್ಯಕ್ರಮದ ಅಲ್ಲಮಪ್ರಭು ವೇದಿಕೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಏನದು ಹೇಳಿಕೆ

ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸವನ್ನು ಹೊಂದಿದ್ದು, ನಮ್ಮ ಸಾಹಿತಿಯನ್ನು ಇದನ್ನು ಸಾಬೀತು ಮಾಡಿದ್ದಾರೆ. ನಮ್ಮ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತ್ರಿಗಳು ಲಭಿಸಿರೋದು ನಮ್ಮ ಹೆಮ್ಮೆ ಎಂದಿದ್ದಾರೆ.

ನಮ್ಮ ಕನ್ನಡ ಭಾಷೆ ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ಇಂತಹ ನಾಡಿನಲ್ಲಿ ಜನಿಸಲು ನಾವು ಪುಣ್ಯ ಮಾಡಿರಬೇಕು. ಆದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ 

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಡಿರುವ ಮಾತುಗಳ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂದೆ ಯಾವ ಹಂತಕ್ಕೆ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ

Post a Comment

0 Comments