ಬೆಳಗಾವಿ: ಸನ್ 2023-24ನೇ ಸಾಲಿನ ಆರ್ಥಿಕ ವರ್ಷ ಮುಕ್ತಾಯ ಹಂತದಲ್ಲಿದ್ದು, ಈಗಾಗಲೇ ಬಿಡುಗಡೆಯಾದ ಅನುದಾನವನ್ನು ಲ್ಯಾಪ್ಸ ಆಗದಂತೆ ಬಳಕೆ ಮಾಡಲು ಅಧಿಕಾರಿಗಳಿಗೆ ಜಿಪಂ ಸಿಇಓ ರಾಹುಲ್ ಶಿಂಧೆ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲ ಇತ್ತೀಚಿಗೆ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಬೆಳಗಾವಿ, ಚಿಕ್ಕೋಡಿ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆ, ಹಾಗೂ ಕೆ.ಆರ್.ಐ.ಡಿಎಲ್ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2023-24ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನವನ್ನು ಸಕಾಲದಲ್ಲಿ ಬಳಿಸಿಕೊಂಡು ಲ್ಯಾಪ್ಸ ಆಗದಂತೆ ನೋಡಿಕೊಳ್ಳುವುದು, ಒಂದು ವೇಳೆ ಲ್ಯಾಪ್ಸ ಆದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ಟೆಂಡರ್ ಕರೆಯುವಲ್ಲಿ ವಿಳಂಬಕ್ಕೆ ಆಸ್ಪದ ನೀಡುವಂತಿಲ್ಲ. ಸೈಟ್ ತೊಂದರೆಗಳನ್ನು ಆದಷ್ಟು ಬೇಗ ಪರಿಹರಿಸಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಪೂರ್ಣಗೊಳಿಸುವಂತೆ ಎಂದು ಸಭೆಗೆ ತಿಳಿಸಿದರು.
ಕಾರ್ಯಕಾರಿ ಅಭಿಯಂತರರು ಪಂಚಾಯತ್ ರಾಜ್ ಇಂಜನೀಯರಿಂಗ ವಿಭಾಗ ಚಿಕ್ಕೋಡಿ/ಬೆಳಗಾವಿ, ಕಾರ್ಯಕಾರಿ ಅಭಿಯಂತರರು ಪಿ.ಎಮ್.ಜಿ.ಎಸ್.ವಾಯ್. ಕಾರ್ಯಕಾರಿ ಅಭಿಯಂತರರು ಕೆ.ಆರ್.ಐ.ಡಿ.ಎಲ್, ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂ.ರಾ.ಇಂ. ವಿಭಾಗ ಬೆಳಗಾವಿ/ಚಿಕ್ಕೋಡಿ ಮತ್ತಿತರರು ಉಪಸ್ಥಿತರಿದ್ದರು.
0 Comments