ದೆಹಲಿ: ಲೋಕಸಭಾ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಹೆಚ್ಚಿನ ಸ್ಥಾನಗಳನ್ನ ಗೆಲ್ಲುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿ ಪಾರ್ಮ ನೀಡದ ಕಾರಣ ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಿರಿಯ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ ಅವರು ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಇಂದು ಗೌಪ್ಯ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಹಾಗೂ ಮರಿ ಹುಲಿ ಬಿ ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮತ್ತೆ ಕರೆತರುವ ವಿಚಾರವಾಗಿ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ಬಳಿಕ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದು, ಬಳಿಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ
ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಶೆಟ್ಟರ್ ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇ-ಮೇಲ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿದು ಬಂದಿದೆ...
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್:
ದೆಹಲಿಯಲ್ಲಿ ಜಗದೀಶ ಶಟ್ಟರ ಅವರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಜಗದೀಶ್ ಶೆಟ್ಟರ ವಾಪಸ್ಸ ತರುವಲ್ಲಿ ರಾಜಾಹುಲಿ ರಣತಂತ್ರ:
2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮುನಿಸುಕೊಂಡ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು ಕಾಂಗ್ರೆಸ್ ಟಕೇಟು ಪಡೆದು ಪರಾಭವಗೊಂಡಿದ್ದರು. ಇದರ ಜೊತೆಗೆ ಲಕ್ಷ್ಮಣ ಸವದಿ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದರು, ಇದು ಬಿಜೆಪಿಗೆ ಭಾರಿ ಪೆಟ್ಟು ಕೊಟ್ಟಿತ್ತು, ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿತು. ಇದೆಲ್ಲದವನ್ನು ಮನಗಂಡ ಯಡಿಯೂರಪ್ಪ ಏನಾದ್ರೂ ಮಾಡಿ ಜಗದೀಶ್ ಶೆಟ್ಟರ ಅನ್ನು ಬಿಜೆಪಿಗೆ ಕರೆತರಬೇಕು ಎಂದು ಶಪಥ ಮಾಡಿದರು.
ಲೋಕಸಭಾ ಚುನಾವಣೆ ಹೊತ್ತಲಿ ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಹೈಕಮಾಂಡ್ ಅನ್ನು ಮನವೊಲಿಸಿ, ಡೈರೆಕ್ಟ್ ಅಮಿತ್ ಶಾ ಜೊತೆಗೆ ಜಗದೀಶ್ ಶೆಟ್ಟರ್ ಅನ್ನು ಮಾತಾಡಿಸಿದ್ದಾರೆ, ಹಿರಿಯರ ಮಾತಿಗೆ ಕಟು ಬಿದ್ದು ಮತ್ತೆ ತವರಿಗೆ ಜಗದೀಶ್ ಶೆಟ್ಟರ್ ವಾಪಸ್ ಆಗಲು ಸಮ್ಮತಿ ಸೂಚಿಸಿದ್ದಾರು
ಜಗದೀಶ್ ಶೆಟ್ಟರ್ ಅನ್ನು ದಿಲ್ಲಿಗೆ ಕರೆದೊಯ್ದಿದ್ದೆ ಅವರ ಶಿಷ್ಯ ಶಂಕರ ಪಾಟೀಲ್ ಮುನೇನಕೊಪ್ಪ, ಈ ಹಿಂದೆ ಜಗದೀಶ್ ಶೆಟ್ಟರ್ ತನ್ನ ಶಿಷ್ಯನಾದ ಶಂಕರ ಪಾಟೀಲ್ ಮುನೇನಕೊಪ್ಪನನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ವಾಗ್ದಾನ ಕೊಟ್ಟಿದ್ದರು, ಆದ್ರೆ ಇದೀಗ ಶಿಷ್ಯನೇ ಗುರುವನ್ನು ಬಿಜೆಪಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ, ಅಲ್ಲದೇ ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಒತ್ತಡಕ್ಕೆ ಜಗದೀಶ್ ಶೆಟ್ಟರ್ ಮನಸೋತು ಮರಳಿ ಗೂಡಿಗೆ ಬಂದಿದ್ದಾರೆ.
ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದು ಅಧಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತೆ ಇತ್ತ ರಾಜಕೀಯ ಸಂಚಲನ ಶುರುವಾಗಿದೆ ಮತ್ತೊಬ್ಬ ನಾಯಕ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಲಕ್ಷ್ಮಣ್ ಸವದಿ ಅವರು ರವಿವಾರ ಬಿಜೆಪಿ ಸೇರುತ್ತಾರೆಂದು ವದಂತಿಗಳು ತುಂಬಾ ಹರಡುದಾಡುತ್ತಿದೆ ಬಿಜೆಪಿ ಸೇರಿದಂತೆ ಅವರ ಮನವರಿಸಲು ಕಾಂಗ್ರೆಸ್ ನಾಯಕರು ಲಕ್ಷ್ಮಣ ಸವದಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ರಾಜ್ಯಕಾರಣದಲ್ಲಿ ಏನಾಗುತ್ತದೆ ಎಂಬುದು ಕಾದು ನೋಡೋಣ
0 Comments