ಒಂದು ಜಾತಿಗೆ ಸೀಮಿತಾದ ಸಮಾವೇಶವಲ್ಲ ಸಚಿವ ಜಾರಕಿಹೊಳಿ

ಚಿತ್ರದುರ್ಗ: ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಆಯೋಜಿಸಿದ್ದ "ಶೋಷಿತರ ಜಾಗೃತಿ ಸಮಾವೇಶ" ಜರುಗಿತು.
ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು

ಸಚಿವ ಸತೀಶ ಜಾರಕಿಹೊಳಿ ಮಾತನಾಡಿ‌ ಸಾವಿರಾರು ವರ್ಷಗಳಿಂದ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಇದು ಯಾವುದೇ ಜಾತಿಗೆ ಸೀಮಿತವಾದ ಸಮಾವೇಶವಲ್ಲ, ಯಾರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಿ ಕೊಡುವ ಸಮಾವೇಶ.

ಶೋಷಿತರಿಗೆ ಆದ ಅನ್ಯಾಯ, ಅವರು ಕಳೆದುಕೊಂಡ ಹಕ್ಕು, ಅಧಿಕಾರ ಮುಂದಿನ ದಿನಗಳಲ್ಲಿ ಹೇಗೆ ವಾಪಸ್ಸ್‌ ಪಡೆಯಬೇಕು ಎಂಬುವುದಕ್ಕಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಾವಿರಾರು, ನೂರಾರು ವರ್ಷಗಳಿಂದ ಶೋಷಿತರು ಸೌಲಭ್ಯಗಳಿಂದ ವಂಚಿತರಾಗಿದ್ದು, ತಾವೆಲ್ಲ ಸದಾ ಜಾಗೃತರಾಗಿ ಇರಬೇಕೆಂಬ ಉದ್ದೇಶದಿಂದ ಐತಿಹಾಸಿಕ ಜಾಗೃತಿ ಸಮಾವೇಶ ಮಾಡುತ್ತಿದ್ದೇವೆ, ಇದು ಒಂದು ಜಾತಿಗೆ ಸೀಮಿತಾದ ಸಮಾವೇಶವಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀವಾಗಿ, ಸಮಾನತೆಗಾಗಿ ಹೋರಾಟ ನಡೆಸುವ, ನಮ್ಮ ಹಕ್ಕನ್ನು ಪಡೆಯುವ ಉದ್ದೇಶಕ್ಕಾಗಿ ಈ ಸಮಾವೇಶ ಮಾಡುತ್ತಿದ್ದೇವೆ. ಶೋಷಿತರನ್ನು ಜಾಗೃತಿಗೊಳಿಸುವುದು ಕೆಲಸವನ್ನು ನಿರಂತರವಾಗಿ ಮಾಡಬೇಕಿದೆ‌ ಎಂದರು.

ಈ ವೇಳೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದರು.

Post a Comment

0 Comments