ನಾಳೆ ಸಂಗೊಳ್ಳಿ ರಾಯಣ್ಣನ ಪುಣ್ಯ ತಿಥಿ ಹಾಗೂ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮ

 


ಎಂ.ಕೆ. ವಾಣಿ ನ್ಯೂಸ್

ಚನ್ನಮ್ಮನ ಕಿತ್ತೂರು: ಐತಿಹಾಸಿಕ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮಾಜಿ ಸರ್ಕಲನಲ್ಲಿ ಮುಂಜಾನೆ 11-30 ಗಂಟೆಗೆ ಅಪ್ರತಿಮ ದೇಶ ಭಕ್ತ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣನ 193 ನೇ ಪುಣ್ಯ ತಿಥಿಯ ಅಂಗವಾಗಿ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ಚನ್ನಮ್ಮನ ಕಿತ್ತೂರು ಹಾಗೂ ಪಂಚಸೇನೆ ಬೆಳಗಾವಿ ಜಿಲ್ಲಾ ಹಾಗೂ ಚನ್ನಮ್ಮನ ಕಿತ್ತೂರು ತಾಲೂಕಾ ಘಟಕದ ವತಿಯಿಂದ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಮತ್ತು ಕಿತ್ತೂರು ರಾಣಿ ಚನ್ನಮ್ಮನವರ ಭಾವಚಿತ್ರಕ್ಕೆ ಪೂಜೆ ಹಾಗೂ ಪಂಚಸೇನೆಗೆ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. 



ಕಾರಣ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ಹಾಗೂ ಪಂಚಸೇನೆಯ ಜಿಲ್ಲಾ ಮತ್ತು ತಾಲೂಕಾ ಪದಾಧಿಕಾರಿಗಳು, ಸರ್ವ ಸದಸ್ಯರು ಮತ್ತು ರಾಣಿ ಚನ್ನಮ್ಮಾಜಿ ಹಾಗೂ ರಾಯಣ್ಣನ ಅಭಿಮಾನಿಗಳು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ರಾಜ್ಯಾಧ್ಯಕ್ಷ ಮಹಾಂತೇಶ ಕರಬಸನ್ನವರ ಹಾಗೂ ಪಂಚಸೇನೆಯ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕಿರಣ ವಾಳದ ಮನವಿ ಮಾಡಿದ್ದಾರೆ

 

Post a Comment

0 Comments