ಸಮಾಜವಾದಿ ನಾಯಕ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಗೌರವ ಭಾರತ ರತ್ನ

ಎಂ.ಕೆ. ವಾಣಿ ನ್ಯೂಸ್ 
ದೆಹಲಿ: ಸಮಾಜವಾದಿ ನಾಯಕ ಬಿಹಾರ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ (ಮರಣೋತ್ತರ) ಘೋಷಿಸಲಾಗಿದೆ.
ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮತ್ತು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ‘ಸಾಮಾಜಿಕ ನ್ಯಾಯ’ದ ಅಸ್ತ್ರಕ್ಕೆ ಪ್ರತ್ಯುತ್ತರ 970ರ ದಶಕದ ಕೊನೆಯಲ್ಲಿ ಮುಂಗೇರಿ ಲಾಲ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರಿ ಉದ್ಯೋಗದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಪ್ರಯತ್ನವನ್ನು ಕರ್ಪೂರಿ ಅವರು ಮಾಡಿದ್ದರು.  
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಈ ಅಚ್ಚರಿಯ ಆಯ್ಕೆ ನಡೆದಿದೆ. ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯದ ವಿಷಯವನ್ನು ಅದರಲ್ಲೂ ಮುಖ್ಯವಾಗಿ ಜಾತಿ ಗಣತಿಯನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು 1952ರಲ್ಲಿ ಸಮಾಜವಾದಿ ಪಕ್ಷದ ಶಾಸಕರಾಗಿ ಬಿಹಾರ ವಿಧಾನಸಭೆ ಪ್ರವೇಶಿಸಿದ್ದರು. ಚುನಾವಣೆಯಲ್ಲಿ ಒಮ್ಮೆಯೂ ಸೋಲದ ಅವರು ಉಪಮುಖ್ಯಮಂತ್ರಿ ಹುದ್ದೆಗೇರಿದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕರ್ಪೂರಿ ಅವರ ಜನ್ಮಶತಮಾನೋತ್ಸವಕ್ಕೆ ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಘೋಷಣೆ ಮಾಡಿದರು.

Post a Comment

0 Comments