ಜನವರಿ 08: 2024 ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತಿಗೆಯ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಬೆಳಗಾವಿ ಲೋಕಸಭಾ ಟಿಕೆಟ್ ಗಾಗಿ ಬಾರೀ ಪೈಪೋಟಿ ಏರ್ಪಟ್ಟಿರುವದು ನಿಜಾ.
ಹೌದು,, ಸತೀಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದು, ಪುತ್ರಿಯನ್ನ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸ್ಥಳೀಯ ಮಟ್ಟದ ರಾಜಕೀಯದಲ್ಲಿ ಹೆಚ್ಚು ಆಕ್ಟೀವ್ ಆಗಿರುವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಜಾರಕಿಹೊಳಿ ಕುಟುಂಬಸ್ಥರು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಕೇಳಿ ಬರುತ್ತಿದೆ
ಅಲ್ಲದೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಇದೀಗ ಇಬ್ಬರು ಪ್ರಭಾವಿ ಇಬ್ಬರು ಸಚಿವರುಗಳಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಮಕ್ಕಳನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹೆಸರು ಬೆಳಗಾವಿಗೆ ಕೇಳಿಬರುತ್ತಿದೆ, ಅದೇ ರೀತಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಸರು ಕೂಡಾ ಮುಂಚೂಣಿಯಲ್ಲಿದೆ. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಆಗಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಮಕ್ಕಳಿಗೆ ಟಿಕೆಟ್ ವಿಚಾರವಾಗಿ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಪುತ್ರಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಈಗಾಗಲೇ ಹೈಕಮಾಂಡ್ ನಾಯಕರ ಮಟ್ಟದಲ್ಲೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಜೊತೆಗೆ ಉತ್ತಮ ಸ್ನೇಹ ಸಂಬಂಧ ಹೊಂದಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಹ ಈಗಾಗಲೇ ಮಗನಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಡಿ ಕೆ ಶಿವಕುಮಾರ್ ಅವರು ಲಿಂಗಾಯತ ಪ್ರಭಾವಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೊಡಿಸುವ ಪ್ರಯತ್ನಕ್ಕೆ ಮುಂದಾಗುತ್ತಾರಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಏಕಾಂಗಿಯಾಗಿ ಭೇಟಿ ಮಾಡಿ ಬಂದಿರುವ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ಜೊತೆಗೆ ಬೆಳಗಾವಿ ರಾಜಕೀಯ ಹಾಗೂ ಲೋಕಸಭಾ ಚುಣಾವಣೆಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

0 Comments