ನಾನು ಕರಸೇವಕ, ನನ್ನನ್ನು ಬಂಧಿಸಿ ಸಿಟಿ ರವಿ ಪ್ರತಿಭಟನೆ
ಜನವರಿ 04: ಕರ್ನಾಟಕ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅಭಿಯಾನವನ್ನು ಆರಂಭಿಸಿದೆ. ಗುರುವಾರ 'ನಾನು ಕರಸೇವಕ, ನನ್ನನ್ನು ಬಂಧಿಸಿ' ಎಂದು ಘೋಷವಾಕ್ಯದಡಿ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ನಾಯಕರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಚಿಕ್ಕಮಗಳೂರಿನಲ್ಲಿ 'ನಾನು ಕರಸೇವಕ, ನನ್ನನ್ನು ಬಂಧಿಸಿ' ಎಂದು ಬಿಜೆಪಿ ಕಾರ್ಯಕರ್ತರು ಪಕ್ಷದ ನಾಯಕ ಸಿ. ಟಿ. ರವಿ ನೇತೃತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ನುಗ್ಗಲು ಬಿಜೆಪಿ ಕಾರ್ಯಕರ್ತರು ಪ್ರಯತ್ನ ನಡೆಸಿದರು.
*ಸಿ. ಟಿ. ರವಿ ಪೊಲೀಸ್ ವಶಕ್ಕೆ;* ಗುರುವಾರ ಚಿಕ್ಕಮಗಳೂರು ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಿ. ಟಿ. ರವಿ, 'ನಾನೂ ಕರಸೇವಕ, ನನ್ನನ್ನು ಬಂಧಿಸಿ' ಎಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು...
ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ. ಟಿ. ರವಿ ಮೌನ ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದಾಗಿ ಕೆಲಕಾಲ ನಗರ ಪೊಲೀಸ್ ಠಾಣೆ ಎದುರು ಹೈಡ್ರಾಮವೇ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆ ಆವರಣದಿಂದ ಹೊರಗೆ ಕಳುಹಿಸಿದರು. ನಂತರ ಸಿ. ಟಿ. ರವಿ ಅವರನ್ನು ಬಿಡುಗಡೆ ಮಾಡಲಾಯತು.
0 Comments