ಲೋಕಸಭಾ ಚುನಾವಣೆ ಪ್ರಣಾಳಿಕೆ ತಯಾರಿ ಸಭೆ ಜರುಗಿತು

ಎಂ ಕೆ ವಾಣಿ ನ್ಯೂಸ್ 

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೇಸ್ ಪಕ್ಷದ ಪ್ರಣಾಳಿಕೆ ತಯಾರಿಕೆ

ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳಕರ್  ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಮಹಿಳಾ ವಿಭಾಗದ ವತಿಯಿಂದ  ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಲಾಯಿತು.

ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗಾಗಿ ಜಾರಿಗೊಳಿಸಬಹುದಾದ ಹೊಸ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ವೇಳೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, NSUI ನ ಮಾಜಿ ಅಧ್ಯಕ್ಷೆ ರುಚಿರ್ ಗುಪ್ತಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರು ಉಪಸ್ಥಿತರಿದ್ದರು

Post a Comment

0 Comments