ಎಂ ಕೆ ವಾಣಿ ನ್ಯೂಸ್
ಚಿಕ್ಕೋಡಿ: ಪಟ್ಟಣದಲ್ಲಿ ವಿವಿಧ ಇಲಾಖೆಗಳಿಗೆ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪರಿಶೀಲನೆ ನಡೆಸಿದರು.ಚಿಕ್ಕೋಡಿಯ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು. ಬಳಿಕ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಆಸ್ಪತ್ರೆಯಲ್ಲಿನ ಸ್ವಚ್ಛತೆ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇ ರೀತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಭೇಟಿ ನೀಡಿ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಬಳಿಕ ಪಂಚಾಯತ್ ರಾಜ್ಯ ಇಂಜಿನೀಯರಿಂಗ್ ವಿಭಾಗ ಇಲಾಖೆಗೆ ಭೇಟಿ ನೀಡಿ ಸಿಬ್ಬಂದಿ ಜೊತೆ ಕಾಮಗಾರಿಗಳ ಕುರಿತು ಚರ್ಚಿಸಿದರು.
ಚಿಕ್ಕೋಡಿ ತಾಲೂಕಿನ ನೀರಿನ ಗುಣಮಟ್ಟ ಪರೀಕ್ಷೆ ಪ್ರಯೋಗಾಲಯಕ್ಕೆ ಭೇಟಿ ನೀಡಿದರು. ನಂತರ ಸಾಮರ್ಥ್ಯಸೌಧ ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತದನಂತರ ಕಾಗವಾಡ ತಾಲೂಕಿಗೆ ಭೇಟಿ ನೀಡಿ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದರು.
ಬಳಿಕ ಬರಗಾಲ ಮತ್ತು ಚುನಾವಣಾ ಸಂಬಂಧಿಸಿದ ವಿಷಯಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments