ಕಿತ್ತೂರ ವಿಜಯ
ಚನ್ನಮ್ಮನ ಕಿತ್ತೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಬೆಳವಣಿಗೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಮತದಾರರ ಪಾತ್ರ ಬಹಳ ಮುಖ್ಯವಾಗಿದೆ ಹಾಗೆಯೇ ಪ್ರಜಾ ಪ್ರಭುತ್ವ ಉಳಿಯಲು ಮತದಾನ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು ಎಂದು ಸಹಾಯಕ ನಿರ್ದೇಶಕ ಲಿಂಗರಾಜ ಹಲಕರ್ಣಿಮಠ ಹೇಳಿದರು.
ತಾಲೂಕಿನ ಅಂಬಡಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ತಾಲೂಕು ಪಂಚಾಯಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಕೂಲಿಕಾರರಿಗೆ ಮತದಾನ ಜಾಗೃತಿ, ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.
ಪ್ರಜಾ ಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮತವೂ ಪವಿತ್ರವಾದುದು. ಯಾವುದೇ ಆಮಿಷಗಳಿಗೆ ಒಳಗಾಗದೆ ಲೋಕ ಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಿ ನಿಮ್ಮ ಹಕ್ಕನ್ನು ಚಲಾಯಿಸಿ ಎಂದರು.
ಸಹಾಯಕ ನರ‍್ದೇಶಕ ಸುರೇಶ್ ನಾಗೋಜಿ ಮಾತನಾಡಿ, ಮತದಾರರು ಪ್ರಾಮಾಣಿಕ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿದಾಗ ಉತ್ತಮವಾದ ರಾಷ್ಟ್ರ ನರ‍್ಮಾಣವಾಗಲು ಸಾಧ್ಯ ಎಂದು ಹೇಳಿದರು.
ಈ ವೇಳೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಉಡಕೇರಿ, ಐಇಸಿ ಸಂಯೋಜಕಿ ಎಸ್ ಬಿ ಜವಳಿ, ತಾಂತ್ರಿಕ ಸಹಾಯಕ ಪರಶುರಾಮ ರಂಗಪುರಿ, ಬಿಎಫ್ಟಿ ಕಲ್ಲಪ್ಪ ಚಕಡಿ, ಗ್ರಾಮ ಕಾಯಕಮಿತ್ರ ನಂದಾ ಸುಳೇಬಾವಿ ಸೇರಿದಂತೆ ಮನರೆಗಾ ಕೂಲಿಕಾರರು ಹಾಗೂ ಗ್ರಾಮಸ್ಥರು ಇದ್ದರು.

0 Comments