ಹೋಳಿ ಆಚರಣೆ- ಎಸ್ ಎಸ್ ಎಲ್ ಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಿರಲಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ

ಕಿತ್ತೂರು ವಿಜಯ 
ಬೆಳಗಾವಿ: ಮಾರ್ಚ 25 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಇರುವುದರಿಂದ  ಅಂದೇ ಹೋಳಿ ಹಬ್ಬವಿದೆ ಆ ದಿನ ಪರೀಕ್ಷೆಗೆ ತೆರಳುವ ಮಕ್ಕಳಿಗೆ ಬಣ್ಣ ಎರಚುವುದು ಸೇರಿದಂತೆ ಯಾವುದೇ ರೀತಿಯ ಒತ್ತಾಯ ಮಾಡಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಎಸ್ ಎಸ್ ಎಲ್ ಸಿ  ಪರೀಕ್ಷಾರ್ಥಿಗಳು ಸಕಾಲದಲ್ಲಿ ಪರೀಕ್ಷಾ ಕೇಂದ್ರ ತಲುಪಬೇಕಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು.

ಪರೀಕ್ಷೆಗೆ ತೆರಳುವ ಮಕ್ಕಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Post a Comment

0 Comments