ರಾಣಿ ಚನ್ನಮ್ಮ ಮಹಿಳಾ ವೇದಿಕೆ ವತಿಯಿಂದ ನಾಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ




ಕಿತ್ತೂರ ವಿಜಯ

 ಚನ್ನಮ್ಮನ ಕಿತ್ತೂರು: ಇಲ್ಲಿಯ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಫೆ 16 ರಂದು ಸಾಯಂಕಾಲ 4 ಗಂಟೆಗೆ ರಾಜಗುರು ಸಂಸ್ಥಾನ ಕಲ್ಮಠ, ರಾಣಿ ಚನ್ನಮ್ಮ ಮಹಿಳಾ ವೇದಿಕೆ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಕದಳಿ ಮಹಿಳಾ ವೇದಿಕೆ ಮತ್ತು ತಾಲೂಕಾ ಶರಣ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುವದು ಎಂದು ಕಿತ್ತೂರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನಿದ್ಯವನ್ನು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಮತ್ತು ನಿಚ್ಚಣಕಿ ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳ ವಹಿಸಲಿದ್ದಾರೆ. 

ಅಧ್ಯಕ್ಷರಾಗಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಆಗಮಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಜುಳಾ ಮಹಾಂತೇಶ ದೊಡಗೌಡರ ಮಾಡಲಿದ್ದಾರೆ. 

ಸಾವಿತ್ರಿ ಭಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಮೀನಾಕ್ಷಿ ಸೂಡಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಿತ್ತೂರು ಆರಕ್ಷಕ ಉಪ ನಿರೀಕ್ಷಕ ಪ್ರವೀಣ ಗಂಗೋಳ ಮತ್ತು ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಗಂಗಣ್ಣ ಕರೀಕಟ್ಟಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಮಹಿಳಾ ಮಂಡಳದ ಸದಸ್ಯರು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಿತ್ತೂರ ನಾಡಿನ ಜನತೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

 

Post a Comment

0 Comments