ದಿನದಂದು ಎಲ್ಲ ನರೇಗಾ ಕೂಲಿಕಾರ್ಮಿಕರು ತಪ್ಪದೇ ಮತದಾನ ಮಾಡಿ ಭೀಮಪ್ಪ ತಳವಾರ

ನರೇಗಾ ಕೂಲಿಕಾರ್ಮಿಕರು ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿರುವುದು


ಕಿತ್ತೂರ ವಿಜಯ 

ಚನ್ನಮ್ಮನ ಕಿತ್ತೂರು: ಲೋಕಸಭೆ ಸರ‍್ವತ್ರಿಕ ಚುನಾವಣೆ ಅಂಗವಾಗಿ ಮೇ 07 ರಂದು ನಡೆಯುವ ಮತದಾನ ದಿನದಂದು ಎಲ್ಲಾ ನರೇಗಾ ಕೂಲಿಕಾರ್ಮಿಕರು ತಪ್ಪದೇ ಮತದಾನ ಮಾಡಬೇಕು ಎಂದು ತಾಲ್ಲೂಕು ಸ್ವೀಪ್ ಅಧ್ಯಕ್ಷರು ಹಾಗೂ ತಾಪಂ ಇಒ ಭೀಮಪ್ಪ ತಳವಾರ ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ಬೆಳಗಾವಿ ಮತ್ತು ತಾಲ್ಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ , ತಾಲೂಕ ಪಂಚಾಯತಿ ಚ.ಕಿತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಸರ‍್ವತ್ರಿಕ ಚುನಾವಣೆ ಅಂಗವಾಗಿ ತಾಲ್ಲೂಕಿನ ಕಲಭಾಂವಿ ಗ್ರಾಪಂ ವ್ಯಾಪ್ತಿಯ ಮನರೇಗಾ ಕಾಮಗಾರಿ ಸ್ಥಳಗಳಲ್ಲಿ  ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಹಬ್ಬವಿದ್ದಂತೆ. ಅದರಲ್ಲಿ ಮತದಾನವು ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಹಾಗಾಗಿ ಯಾರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.  

ಚುನಾವಣೆ ದಿನ ಯಾವುದೇ ಆಸೆ ಆಮೀಷಕ್ಕೆ ಒಳಗಾಗದೇ ಎಲ್ಲರೂ ನೈತಿಕವಾಗಿ ಮತದಾನ ಮಾಡಬೇಕು ಎಂದು  ತಿಳಿಸಿದರು.

ಯುವ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ಸುಭದ್ರಗೊಳಿಸುವಲ್ಲಿ ಮುಖ್ಯಪಾತ್ರ ವಹಿಸಬೇಕು ಎಂದರು.

ನರೇಗಾ ಯೋಜನೆಯಡಿ ದಿನಕೂಲಿ ರೂ 349 ಆಗಿದೆ. ಯಾರೂ ಗುಳೆ ಹೋಗಬಾರದು. ನಿಮ್ಮೂರಲ್ಲಿಯೇ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಈ ವೇಳೆ ಗ್ರಾಉ ಸಹಾಯಕ ನರ‍್ದೇಶಕ ಲಿಂಗರಾಜ ಹಲರ‍್ಣಿಮಠ, ತಾಲ್ಲೂಕು ಐಇಸಿ ಸಂಯೋಜಕ ಎಸ್.ಬಿ.ಜವಳಿ, ಪಿಡಿಓ ವಿವೇಕಾನಂದ ಶಿಂಧೆ, ಬಿಎಫ್ಟಿ ಬಸವರಾಜ ಹೊಸಮನಿ, ಗ್ರಾ.ಪಂ. ಸಿಬ್ಬಂದಿಗಳು ಸೇರಿದಂತೆ ಕೂಲಿಕರ‍್ಮಿಕರು ಹಾಜರಿದ್ದರು.

 

Post a Comment

0 Comments