ಅಪಘಾತ ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿ ಸ್ಥಳದಲ್ಲೇ ಸಾವು

ಕಿತ್ತೂರ ವಿಜಯ 
ಧಾರವಾಡ : ಬೈಕ್‌ ಹಾಗೂ ಕಾರ ಮಧ್ಯೆ ಅಪಘಾತ ಸಂಭವಿಸಿ ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ರುದ್ರಪ್ಪ ಸಿದ್ದಣ್ಣವರ ಎಂದು ತಿಳಿದು ಬಂದಿದ್ದು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪೊಲೀಸ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
ಶುಕ್ರವಾರ ರಾತ್ರಿ ಕರ್ತವ್ಯ ಮುಗಿಸಿ ಮರಳಿ ಮನೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು ರುದ್ರಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Post a Comment

0 Comments