![]() |
| ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ |
ಕಿತ್ತೂರ ವಿಜಯ
ಚಿಕ್ಕೋಡಿ: ಕಳೆದ 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಯಬಾಗ ವಿಧಾನ ಸಭಾ ಮೀಸಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಭಯ ರಾಷ್ಟ್ರೀಯ ಪಕ್ಷಗಳಿಗೆ ನಡುಕ ಹುಟ್ಟಿಸಿದ್ದ ದಕ್ಷ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡವ ಇಂಗಿತ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ನಗರದಲ್ಲಿರುವ ಅವರ ಪಾರ್ಮಹೌಸದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 60 ಸಾವಿರಕ್ಕೂ ಅಧಿಕ ಮತ ಪಡೆದು ಕೇವಲ 2400 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು.
ಶಂಭು ಕಲ್ಲೋಳಕರ ಅವರು ಮೊದಲ ದಿನವೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದ್ದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಮಾಡಿದ ನಿರ್ಧಾರದಿಂದ ಇಡಿ ಕ್ಷೇತ್ರದಲ್ಲಿ ರಾಜಕೀಯ ರಂಗು ಗರಿಗೆದರಿದ್ದು ಉಭಯ ರಾಷ್ಟ್ರೀಯ ಪಕ್ಷಗಳಿಗೆ ಮತ್ತೆ ನಡುಕ ಆರಂಭವಾಗಿದೆ.

0 Comments