![]() |
| ಕೆನರಾ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸುತ್ತಿರುವುದು |
ಕಿತ್ತೂರ ವಿಜಯ
ಕಾರವಾರ: ಲೋಕಸಭಾ ಚುನಾವಣೆ 2024ರ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ನಿಮಿತ್ತ ಕಾರವಾರದ ದೈವಜ್ಞ ಕಲ್ಯಾಣ ಮಂಟಪದಿಂದ ಜಿಲ್ಲಾಧಿಕಾರಿ ಕಛೇರಿಯವರೆಗೆ ಬೃಹತ್ ರೋಡ್ ಶೋ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜೊತೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ಕುಮಾರ, ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಉಸ್ತುವಾರಿ ಹರತಾಳು ಹಾಲಪ್ಪ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ದಿನಕರ್ ಶೆಟ್ಟಿ, ವಿಠ್ಠಲ ಹಲಗೇಕರ್, ವಿಧಾನ ಪರಿಷತ್
ಶಾಸಕರಾದ ಗಣಪತಿ ಉಳ್ವೇಕರ, ಶಾಂತಾರಾಮ ಸಿದ್ದಿ, ಮಾಜಿ ಶಾಸಕರಾದ ಸುನಿಲ್ ಹೆಗಡೆ, ಅರವಿಂದ ಪಾಟೀಲ್, ಎಸ್.ವಿ.ಸಂಕನೂರ, ಮಹಾಂತೇಶ ದೊಡ್ಡಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಲೋಕಸಭಾ ಚುನಾವಣಾ ಸಂಚಾಲಕ ಗೋವಿಂದ ನಾಯ್ಕ, ಪ್ರಮುಖರಾದ ಹರಿಪ್ರಕಾಶ ಕೋಣೆಮನೆ, ಯೋಗೀಶ್ ಪಾಟೀಲ್, ಪ್ರಸನ್ನ ಕೆರೆಕೈ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಎಲ್ಲ ಮಂಡಲಗಳ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಜೆಡಿಎಸ್ ಮುಖಂಡರು, ಸಹಸ್ರಾರು ಕಾರ್ಯಕರ್ತರು ಭಾಗವಹಿಸಿದ್ದರು.

0 Comments