ಕಿತ್ತೂರು ವಿಜಯ
ಚನ್ನಮ್ಮನ ಕಿತ್ತೂರು: ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಬೇಕು ಎಂದು ಚ.ಕಿತ್ತೂರು ತಾಲೂಕು ಪಂಚಾಯತ್ ಇಓ ಹಾಗೂ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಭೀಮಪ್ಪ ತಳವಾರ ಹೇಳಿದರು.
ತಾಲೂಕು ಸ್ವೀಪ್ ಸಮಿತಿ , ತಾಲೂಕ ಪಂಚಾಯತಿ ಚ.ಕಿತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ತಾಲ್ಲೂಕಿನ ದೇಗಾಂವ ಗ್ರಾಪಂ ವ್ಯಾಪ್ತಿಯ ಮನರೇಗಾ ಕಾಮಗಾರಿ ಸ್ಥಳಗಳಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಪ್ರಜಾಪ್ರಭುತ್ವದಲ್ಲಿ ಮತದಾರನೇ ನಿಜವಾದ ಪ್ರಭು. ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯಬೇಕೆಂದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ನಮಗೆ ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕು. ಮೇ 7ರಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆ ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೆ ವಿವೇಚನೆಯಿಂದ ಮತ ಚಲಾಯಿಸಬೇಕು” ಎಂದರು.
ಕೂಲಿಕಾರ್ಮಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಲಿಂಗರಾಜ ಹಲಕರ್ಣಿಮಠ, ಪಿಡಿಓ ರವಿ ಉಡಕೇರಿ, ತಾಂತ್ರಿಕ ಸಂಯೋಜಕ ವಿನಯಕುಮಾರ ಪಾಟೀಲ್, ಐಇಸಿ ಸಂಯೋಜಕಿ ಎಸ್.ಬಿ.ಜವಳಿ, ಬಿಎಫ್ ಟಿಗಳು ಕಲ್ಲಪ್ಪ ಚಕಡಿ, ಮಂಜುನಾಥ ಅಗಸರ, ಗ್ರಾಮ ಕಾಯಕಮಿತ್ರ ಸಂಗೀತಾ ಪಾಗದ, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಕೂಲಿಕಾರ್ಮಿಕರು ಹಾಜರಿದ್ದರು.
0 Comments