ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮತ್ತು ಲಕ್ಷ್ಮಣ್ ಸೌದಿ. ಲೋಕಸಭೆ ಚುನಾವಣೆಯ ಬಳಿಕ ಭಿನ್ನಮತ ಶುರುವಾಗಿದೆ

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ ನಾಯಕರಲ್ಲಿ ಭಿನ್ನಮತದ ಬಿರುಗಾಳಿ ಬೀಸುತ್ತಿದ್ದೆ, ಗುರುವಾರ ಸಚಿವ ಸತೀಶ ಜಾರಕಿಹೊಳಿ ಕಾಂಗ್ರೆಸ್ ಶಾಸಕ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತಿದ್ದಂತೆ ಬೆಳಗಾವಿ ರಾಜಕಾರಣದಲ್ಲಿ ಮಿಂಚಿನ ಸಂಚಲನ ಉಂಟಾಗಿದೆ.
ಅಥಣಿ ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ಶುಕ್ರವಾರ ಕುಡಚಿ ಶಾಸಕ ಮಹೇಂದ್ರ ತಮ್ಮನ್ನವರ ಬೇಟಿ ನೀಡಿ ಒಂದು ಗಂಟೆಗಳ ಕಾಲ ಗುಪ್ತ ಮಾತುಕತೆ ನಡೆಸಿದ್ದು, ಜಿಲ್ಲಾ ರಾಜಕಾರಣದಲ್ಲಿ ಹಲವು ಭಗೆಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಇದರಿಂದ ಮತ್ತೊಂದು ಸುತ್ತಿನ ರಾಜಕೀಯ ಯುದ್ಧ ಆರಂಭಗೊಳ್ಳುವ ಲಕ್ಷಣ ಗೋಚರಿಸುತ್ತಿದೆ.
0 Comments