ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ರಾಯಬಾಗ ತಾಲೂಕಿನ ಸುಟ್ಟಟ್ಟಿಯ ಅಕ್ಕಾತಾಯಿ ಲಂಗೂಟಿ ಅವರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿದರು.
ಇದೇ ವೇಳೆ ಅಜ್ಜಿಯ ಹೋಳಿಗೆ ಊಟಕ್ಕೆ ಸಾತ್ ನೀಡಿದ್ದ ಇನ್ನೂ 6-7 ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಸೀರೆ ನೀಡಿ ಗೌರವಿಸಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶಣ್ಣ ಜಾರಕಿಹೊಳಿ ಹಾಗೂ ಜಿಲ್ಲೆಯ ಶಾಸಕರು ಇದ್ದರು.
0 Comments