ಕಿತ್ತೂರು ವಿಜಯ ಸುದ್ದಿ. ಪರೀಕ್ಷಾ ಕೇಂದ್ರಕ್ಕೆ ಶಾಸಕಬಾಬಾ ಸಾಹೇಬ ಪಾಟೀಲ್ ಭೇಟಿ

ಪರೀಕ್ಷಾ ಕೇಂದ್ರಕ್ಕೆ ಶಾಸಕರು ಬಾಬಾಸಾಹೇಬ ಪಾಟೀಲ ಭೇಟಿ

ಚನ್ನಮ್ಮನ ಕಿತ್ತೂರು:- ಜಿಲ್ಲೆಯ ಎಲ್ಲ ಸರಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಜಿಲ್ಲಾ ಪಂಚಾಯಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆರಂಭಿಸಿರುವ 'ಸಿಇಟಿ-ಸಕ್ಷಮ್' ಕಾರ್ಯಕ್ರಮದಡಿ ಚ.ಕಿತ್ತೂರಿನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸುತ್ತಿರುವ ಸಿದ್ದತಾ ಪರೀಕ್ಷೆ ಕೇಂದ್ರದಕ್ಕೆ ಶನಿವಾರ ಶಾಸಕ ಬಾಬಾಸಾಹೇಬ ಪಾಟೀಲ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಸಿಇಟಿ/ನೀಟ್ ಪರೀಕ್ಷೆಯ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು “ಸಿಇಟಿ-ಸಕ್ಷಮ್” ಎಂಬ ವಿನೂತನ ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿದರು.

ಸರಕಾರಿ ವಿಜ್ಞಾನ ಪಿಯು ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಎರಡನೇ ಶನಿವಾರ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಲ್ಕನೇ ಶನಿವಾರ ಸಿದ್ಧತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಸಿಇಟಿ-ನೀಟ್ ಪರೀಕ್ಷೆಗಳಿಗೆ ಅವರನ್ನು ಸಜ್ಜುಗೊಳಿಸುವುದು ಸಿಇಟಿ-ಸಕ್ಷಮ್ ಕಾರ್ಯಕ್ರಮವಾಗಿದೆ ಇದರ ಉಪಯೋಗ ಪ್ರತಿ ವಿದ್ಯಾರ್ಥಿಗಳು ತಗೆದುಕೊಳ್ಳಬೇಕು ಎಂದರು .

ಈ ಕಾರ್ಯಕ್ರಮದ ಅಂಗವಾಗಿ ಇಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮೊದಲನೇ ಅಭ್ಯಾಸ ಪರೀಕ್ಷೆಯನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಿ ಮುಂದಿನ ಪರೀಕ್ಷೆಗೆ ಸಮರ್ಥವಾಗಿ ತಯಾರಿ ಆಗಬೇಕು ಎಂದು ತಿಳಿಸಿದರು.

Post a Comment

0 Comments