ಕಿತ್ತೂರು ವಿಜಯ ಸುದ್ದಿ : ಕಿತ್ತೂರು ಉತ್ಸವವನ್ನು ಅಂತರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸಲು ಜಿಲ್ಲಾ ಆಡಳಿತ ಸಿದ್ಧತೆ.

ಚನ್ನಮ್ಮನ ವಿಜಯೋತ್ಸವ ಅಂತರಾಷ್ಟ್ರೀಯ ಉತ್ಸವನ್ನಾಗಿ ಆಚರಿಸಲು ಸಿದ್ಧತೆ!! ಡಿಸಿ ಮೊಹಮ್ಮದ ರೋಷನ್
ಚನ್ನಮ್ಮನ ಕಿತ್ತೂರು:-  ಚನ್ನಮ್ಮನ ವಿಜಯೋತ್ಸವ 2೦೦ ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಚನ್ನಮ್ಮನ ಕಿತ್ತೂರು ಉತ್ಸವವನ್ನು ವಿಶ್ವ ಮಟ್ಟದ ಕಾರ್ಯಕ್ರಮವನ್ನಾಗಿ ಅದ್ದೂರಿಯಾಗಿ ಆಚರಿಸಲಾಗುವುದು. ಅದಕ್ಕಾಗಿ  ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಪಟ್ಟಣದ  ಶೆಟ್ಟರ ಕಲ್ಯಾಣ ಮಂಟಪದಲ್ಲಿ ಉತ್ಸವದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದವರು. ವಾಯುವ್ಯ ಕರ್ನಾಟಕ ಸಾರಿಗೆ ಹೆಸರನ್ನು “ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ” ಎಂದು ನಾಮಕರಣಕ್ಕೆ ಹಾಗೂ  ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಬದಲಾಗಿ “ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ’ ಎಂದು ಮರುನಾಮಕರಣಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಉತ್ಸವದ ನೆನಪಿಗಾಗಿ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉತ್ಸವದ ಮೆರವಣಿಗೆಯಲ್ಲಿ ಕೇವಲ  ನಂದಿ ಧ್ವಜಕ್ಕೆ ಅನುಮತಿಸಲಾಗುವುದು. ಅಕ್ಟೋಬರ್ 23 ರಂದು ಜರುಗಲಿರುವ ಉತ್ಸವದಲ್ಲಿ ರಾಷ್ಟ್ರಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವದು.
ಈ ಬಾರಿಯ ಉತ್ಸವದ ಅಂಗವಾಗಿ ಏರ್ ಶೋ ಆಯೋಜನೆಗಾಗಿ ಕೇಂದ್ರ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಏರ್ ಷೋ ನಡೆಯುವ ವಿಶ್ಚಾಸವಿದೆ. ಉತ್ಸವದ ಅಂಗವಾಗಿ ಪಾರಂಪರಿಕ ಕ್ರೀಡೆಗಳ ಆಯೋಜನೆಗೆ ಪಟ್ಟಿ ತಯಾರಿಸಲಾಗುತ್ತಿದ್ದು, ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಆಯೋಜನೆಗೆ ಚಿಂತಿಸಲಾಗುವದುವುದೆAದರು. .
ಸಭೆ ನೇತೃತ್ವ ವಹಿಸಿಕೊಂಡು ಶಾಸಕÀ ಬಾಬಾಸಾಹೇಬ ಪಾಟೀಲ ಮಾತನಾಡಿ, ಮುಖ್ಯಮಂತ್ರಿಯವರು, ಜಿಲ್ಲಾಉಸ್ತುವಾರಿ ಸಚಿವರು ಇವರ ಶ್ರಮದಿಂದ ಉತ್ಸವಕ್ಕೆ ಸರ್ಕಾರದಿಂದ ೫ ಕೋಟಿ ಅನುದಾನ ದೊರಕಿತ್ತು. ಉತ್ಸವ ವಿಜೃಂಭಣೆಯಿAದ ಆಚರಿಸಲು ಎಲ್ಲ ಸಿದ್ಧತೆ ತಯಾರಿ ನಡೆದಿದ್ದು. ಯುವ ಅಧಿಕಾರಿಗಳ ನೇತೃತ್ವದಲ್ಲಿ ಹುಮಸ್ಸಿನಿಂದ ಉತ್ಸವ ಅದ್ಧೂರಿಯಾಗಿ  ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಉತ್ಸವದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ  ಉತ್ಸವದ ಯಶಸ್ವಿಗೆ ಸಾರ್ವಜನಿಕರ ಪಾಲ್ಗೊಳುವಿಕೆ ಹಾಗೂ ಜವಾಬ್ದಾರಿ ಅಷ್ಟೇ ಮಹತ್ವದ್ದಾಗಿದೆ. ಉತ್ಸವದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.
ಸಾನಿಧ್ಯ ವಹಿಸಿ ಮಾತನಾಡಿದ ಕಲ್ಮಠದ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮಿಜಿ,  ಈ ಬಾರಿಗೆ ವಿಜಯೋತ್ಸವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣ ಆಚರಿಸುವುದು ಸರಕಾರದ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯು ಆಗಿದೆ. ಉತ್ಸವ ಸ್ಮರಣೀಯ ಉತ್ಸವವಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 
ಸಾರ್ವಜನಿಕರ ಸಲಹೆ-ಸೂಚನೆಗಳು
ಕಿತ್ತೂರು ಉತ್ಸವದಲ್ಲಿ ಕವಿಗೋಷ್ಠಿ ಆಯೋಜನೆ ಜೊತೆಗೆ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಗೋಷ್ಠಿ ಆಯೋಜನೆ, 2೦೦ ನೇ ವರ್ಷದ ವಿಜಯೋತ್ಸವದ ಪ್ರಯುಕ್ತ 2೦೦ ಜನ ಸಾಧಕರನ್ನು ಗುರುತಿಸಿ ಸನ್ಮಾನ; ಮಲ್ಲಸರ್ಜ ಪುತ್ಥಳಿ ನಿರ್ಮಾಣ; ಕಿತ್ತೂರು ಆಳ್ವಿಕೆಗೆ ಸಂಬಂಧಿಸಿದ ಸ್ಮಾರಕಗಳ ಸಂರಕ್ಷಣೆ; ಉತ್ಸವದ ಮೆರವಣಿಗೆಯಲ್ಲಿ ಪೋಲಿಸ್ ಬ್ಯಾಂಡ ಹಾಗೂ ಮರಾಠಾ ಲೈಟ್ ಇನಫೆಂಟ್ರಿ ಬ್ಯಾಂಡ್ ಕರೆತರುವುದರ ಮೂಲಕ ಅದ್ಧೂರಿ ಉತ್ಸವ ಆಚರಣೆಗಾಗಿ ಸಾರ್ವಜನಿಕರು ಅನೇಕ  ಸಲಹೆಗಳನ್ನು ನೀಡಿದರು.
ಈ ವೇಳೆ ಜಿಪಂ ಸಿ.ಇ.ಓ ರಾಹುಲ್ ಶಿಂಧೆ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ದಿನೇಶಕುಮಾರ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನನನಿರ್ದೇಶಕರು ವಿದ್ಯಾವತಿ ಭಜಂತ್ರಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂಪಗಾAವಿ, ಕಿತ್ತೂರು ತಹಶೀಲ್ದಾರುಗಳಾದ  ರವೀಂದ್ರ ಹಾದಿಮನಿ, ಹನಮಂತ ಶಿರಹಟ್ಟಿ, ತಾಪಂ ಇಓ ಕಿರಣ ಗೋರ್ಪಡೆ, ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ರಾಜೇಂದ್ರ ಹುದ್ದಾರ, ನಾನಾಸಾಹೇಬ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಪಪಂ ಸರ್ವಸದಸ್ಯರು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Post a Comment

0 Comments