ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ರಾಣಿ ಚನ್ನಮ್ಮ ವೃತ್ತದಲ್ಲಿ ರವಿವಾರ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವವೇ ಬಲಿಷ್ಠವಾಗದು. ಆದ್ದರಿಂದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಮತ್ತು ಸಾರ್ವತ್ರಿಕ ಮೌಲ್ಯವಾಗಿದೆ.
ಪ್ರಜಾಪ್ರಭುತ್ವ ರಕ್ಷಿಸುವುದು, ಅದರ ಮೌಲ್ಯಗಳನ್ನು ಉತ್ತೇಜಿಸಿವುದು ಹಾಗೂ ಪ್ರಜಾಪ್ರಭುತ್ವ ಅಲ್ಲದ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆ ಅಳವಡಿಸಿಕೊಳ್ಳಲು ಬೆಂಬಲಿಸುವದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ.
ತಾಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ 26 ಕಿ.ಮಿ ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ತಾಲೂಕಿನಲ್ಲಿ ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಿಂದ ಕಿತ್ತೂರ ತಾಲೂಕಿನ ತೇಗೂರ ಗ್ರಾಮದವರೆಗೆ 26 ಕಿ.ಮೀ ಮಾನವ ಸರಪಳಿಯನ್ನು ನಿರ್ಮಿಸಿಲಾಗಿತ್ತು
ರಾಮನಗೌಡ ಕನ್ನೋಳಿ ಸ್ವಾಗತಿಸಿದರು. ಕು.ಸ್ವಾತಿ ಸಂವಿಧಾನ ಪಿಠೀಕೆಯನ್ನು ಬೋಧಿಸಿದರು.
ಬೃಹತ್ ಮಾನವ ಸರಪಳಿ:
ಅಂದಾಜು 26 ಕಿ.ಮಿ ಉದ್ಧದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುವ ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು.
ಈ ವೇಳೆ ತಹಶೀಲ್ದಾರ ರವೀಂದ್ರ ಹಾದಿಮನಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ, ಸಿಪಿಐ ಶಿವಾನಂದ ಗುಡಗನಟ್ಟಿ, ಪಪಂ ಸರ್ವ ಸದಸ್ಯರು, ಕಾಂಗ್ರೇಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ಇತರರಿದ್ದರು
0 Comments