ರಾಣಿ ಚನ್ನಮ್ಮನ ಕಿತ್ತೂರು:
ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು (ರಿ) ರಾಜ್ಯ ಘಟಕ ಧಾರವಾಡದಿಂದ ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಶಿಕ್ಷಕರಿಗೆ ಶಾಲೆಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಸವದತ್ತಿಯ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಸವದತ್ತಿಯ ಶಾಸಕರಾದ ವಿಶ್ವಾಸ ವಸಂತ ವೈದ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಚನ್ನಮ್ಮನ ಕಿತ್ತೂರಿನ ಹಿರೇನಂದಿಹಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆ ರಾಜ್ಯ ಮಟ್ಟದ ಉತ್ತಮ ಶಾಲೆ ಪ್ರಶಸ್ತಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಬಿ ಸಿ ಬಿದರಿ ಹಾಗೂ ಶಾಲೆಯ ಶಿಕ್ಷಕಿ ಶ್ರೀಮತಿ ಪಾರ್ವತಿ ಕುಂಬಾರರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿ ಮೂರು ಪ್ರಶಸ್ತಿಗಳನ್ನು ಪಡೆಯುವದರ ಮೂಲಕ ಶಿಕ್ಷಕ ವೃಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಶಿಕ್ಷಕ ವೃಂದದವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

0 Comments