ಕಿತ್ತೂರು ವಿಜಯ ಸುದ್ದಿ.ಪಂಚಮಸಾಲಿ ಸಮುದಾಯಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ. ಮೀಸಲಾತಿ ನಿಶ್ಚಿತವಾಗಿ ಸಿಗುವ ವಿಶ್ವಾಸವಿದೆ ಎಂದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಹೇಳಿಕೆ

ಕಿತ್ತೂರು ವಿಜಯ ಸುದ್ದಿ. ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ಭರವಸೆ ಇದೆ. ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ.
ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಅವರೊಂದಿಗೆ ಚರ್ಚೆ ಹಾಗೂ ಸಮಾಲೋಚನೆ

ಬೆಂಗಳೂರಿನಲ್ಲಿಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದ ನಿಯೋಗದೊಂದಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ಜೊತೆ ಸಮಾಲೋಚನೆ ನಡೆಸಲಾಯಿತು.

ಈ ವೇಳೆ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸಚಿವರುಗಳಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್, ಶಿವರಾಜ ತಂಗಡಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಬಾಬಾ ಸಾಹೇಬ್ ಪಾಟೀಲ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಸೇರಿದಂತೆ ಪಂಚಮಸಾಲಿ ಸಮಾಜದ ಅನೇಕ ಮುಖಂಡರು ಉಪಸ್ಥಿತರಿದ್ದರು.

 

Post a Comment

0 Comments