ಕಿತ್ತೂರು ವಿಜಯ ಸುದ್ದಿ.ಬೆಳಗಾವಿಯಲ್ಲಿ ತೀವ್ರಗೊಂಡ ಪಂಚಮಸಾಲಿ ಹೋರಾಟ: ವಾಹನಗಳಿಗೆ ಕಲ್ಲು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್


 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಕಿತ್ತೂರು ವಿಜಯ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಮೀಸಲಾತಿಗಾಗಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದ.ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು.ತಳ್ಳಿ.ಮುನ್ನುಗ್ಗುತ್ತಿದ್ದಂತೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ.ಬಸ್, ಕಾರು ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಲಾಗಿದೆ. ಅನೇಕ ವಾಹನಗಳು.ಜಖಂಗೊಂಡಿವೆ.ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ.ಮತ್ತೊಂದೆಡೆ.ಪ್ರತಿಭಟನಾಕಾರರ ಆಕ್ರೋಶ ಇನ್ನಷ್ಟು ಹೆಚ್ಚಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ.ನಿರ್ಮಾಣವಾಗಿದೆ.. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪೊಲೀಸ್ ವಶಕ್ಕೆ

Post a Comment

0 Comments