ಚನ್ನಮ್ಮನ ಕಿತ್ತೂರು: ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘದ
ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ನಾಗರತ್ನ ಪಾಟೀಲ, ಚನ್ನಮ್ಮನ ಕಿತ್ತೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಿಜಯಕುಮಾರ ಶಿಂದೆ ಹಾಗೂ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎಸ್. ಹಿರೇಮಠ ಅವರನ್ನು ನೇಮಕ ಮಾಡಿ ಪ್ರಧಾನ ಕಾರ್ಯದರ್ಶಿ ಅಷ್ಟೇಶ ದಳವಾಯಿ ಆದೇಶ ಹೊರಡಿಸಿದ್ದಾರೆ.ಸಂಘದ ಅಧ್ಯಕ್ಷ ಎಂ.ಎಫ್. ಜಕಾತಿ ಅವರು ನೇಮಕ ಆದೇಶ ಪ್ರತಿಗಳನ್ನು ಮೂವರಿಗೂ ನೀಡಿ ಗೌರವಿಸಿದರು. ಸಂಘದ ನಿಯಮಾವಳಿ ಪ್ರಕಾರ ನಡೆದುಕೊಂಡು ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದರು-ಜಿಲ್ಲಾ ಘಟಕದ ಅಧ್ಯಕ್ಷ ಬಿಷ್ಟಪ್ಪ ಶಿಂದೆ, ಮಹಿಳಾ ಮೋರ್ಚಾ ಅಧ್ಯಕ್ಷ ನಾಗರತ್ನ, ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಎಸ್. ಹಿರೇಮಠ ಮಾತನಾಡಿದರು. ಈ ಸಂಘಟನೆಗೆ ರಾಜ್ಯದ್ಯಂತ ಎಲ್ಲ ರೈತರಿಗೆ ನ್ಯಾಯ ಕೊಡಿಸುವ ಸಂಘಟನೆಯಾಗಿ ಬೆಳೆಯಲಿ ಎಂದು ತಿಳಿಸಿದರು.
0 Comments