ಕಿತ್ತೂರು ವಿಜಯ ಸುದ್ದಿ. ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಈ ಬಗ್ಗೆ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರನ್ನು ಬಲಿಪಡೆದ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡು ಉಭಯ-ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದರ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ನಿರಂತರ ದಾಳಿ-ಪ್ರತಿದಾಳಿ ಆರಂಭವಾಗಿತ್ತು.ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಅಡಗುದಾಣ, ವಾಯುನೆಲೆ, ಸೇನಾ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ತಕ್ಕ ಶಾಸ್ತಿ ಮಾಡಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಸೇನೆ ಭಾರತದ ಮುಂದೆ ಮಂಡಿಯೂರಿದೆ.
ಸದ್ಯ ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಉಭಯ ದೇಶಗಳ ನಡುವೆ ಮಾತುಕತೆ, ಒಪ್ಪಂದದ ಮೇರೆಗೆ ಕದನ ವಿರಾಮ ಘೋಷಣೆಯಾಗಿದ್ದು, ಮೇ12ರಂದು ಭಾರತ-ಪಾಕಿಸ್ತಾನ ದೇಶಗಳ ನಡುವೆ ಮಹತ್ವದ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
0 Comments