ಕಿತ್ತೂರು ವಿಜಯ ಸುದ್ದಿ.ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರಿಗೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.ಮಹಾನಗರ ಪಾಲಿಕೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದ ಎಲ್ಲಾ 35 ಸದಸ್ಯರ ಅರ್ನರ್ಹತೆಗೆ ಹೈಕೋರ್ಟ್ ತಡೆ ನೀಡಿದೆ. ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಕೆಲ ದಿನಗಳ ಹಿಂದೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು.
ಮಹಾನಗರ ಪಾಲಿಕೆಯ 35 ಸದಸ್ಯರು ಆಸ್ತಿ ಪ್ರಮಾಣ ಪತ್ರ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. 35 ಸದಸ್ಯರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕಲಬುರಗಿ ಹೈಕೋರ್ಟ್, ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ತಡೆ ನೀಡಿದೆ.ಈ ಹಿಂದೆ ಬೆಳಗಾವಿ ಪಾಲಿಕೆಯ ಇಬ್ಬರ ಸದಸ್ಯತ್ವ ರದ್ದುಪಡಿಸಿ ಹೊರಡಿಸಿದ್ದ ಆದೇಶಕ್ಕೂ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
0 Comments