ಕಿತ್ತೂರು ವಿಜಯ ಸುದ್ದಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕೋರ್ಟ್ ಗೆ ವರದಿ ಸಲ್ಲಿಸಿದೆ.
ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್ 23ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.
0 Comments