kittur vijay news.ನಾಳೆ ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ.

ಕಿತ್ತೂರು ವಿಜಯ ಸುದ್ದಿ.
ನಾಳೆ ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ. 
ಚ ಕಿತ್ತೂರು: ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಅಧಿವೇಶನ ಸಂದರ್ಭದಲ್ಲಿ ಸುವರ್ಣಸೌಧದ ಎದುರು ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. 
ರಾಜ್ಯ ರೈತ ಸಂಘದ ಅಧ್ಯಕ್ಷ ಚುನ್ನಪ್ಪ ಪೂಜೇರಿ ಹಾಗು ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯದ ಹಲವಾರು ಕಡೆಯಿಂದ ರೈತ ಮುಖಂಡರು ಹಾಗು ಮಠಾಧೀಶರು ಆಗಮಿಸಲಿದ್ದಾರೆ. ಈಗಾಗಲೇ ಅದರ ಸಿದ್ಧತೆಯಲ್ಲಿರುವ ಚುನ್ನಪ್ಪ ಪೂಜೇರಿ, ಪ್ರತಿಭಟನೆಯಲ್ಲಿ ಲಕ್ಷಾಂತರ ರೈತರು ಭಾಗವಹಿಸಲಿದ್ದು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. 
ಪ್ರತಿಭಟನಾ ನಿರತ ರೈತರ ಸುರಕ್ಷತೆಗಾಗಿ ಸರಕಾರ ಎಲ್ಲಾ ಅನುಕೂಲತೆಗಳನ್ನು ಮಾಡಿಕೊಡಬೇಕೆಂದು ಅವರು ವಿನಂತಿಸಿದ್ದಾರೆ.

Post a Comment

0 Comments