kittur vijay news.ಕಿತ್ತೂರ ತಾಲೂಕಿನ ದೇವರಶೀಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರಿಗೆ ವಸೂಲಾತಿ ಮಗಾ ಅಭಿಯಾನ ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ರಾಹುಲ್ ಶಿಂಧೆ ಪರಿಶೀಲನೆ

ಕಿತ್ತೂರು ವಿಜಯ ಸುದ್ದಿ , 

ಇಂದು ಬೆಳಗಾವಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತೆರಿಗೆ ವಸೂಲಾತಿ ಮೆಗಾ ಅಭಿಯಾನದ ಪ್ರಯುಕ್ತ ಚನ್ನಮ್ಮನ ಕಿತ್ತೂರು ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ *ತೆರಿಗೆ ವಸೂಲಾತಿ ಮೆಗಾ ಅಭಿಯಾನದ* ಪ್ರಗತಿಯನ್ನು *ಜಿಲ್ಲಾ ಪಂಚಾಯತ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ರಾಹುಲ್ ಶಿಂಧೆ* ಅವರು ಇಂದು ಕಿತ್ತೂರ ತಾಲೂಕಿಗೆ ಭೇಟಿ ನೀಡಿ ಪರಿಶೀಲಿಸಿದರು.

 ಕಿತ್ತೂರ ತಾಲೂಕಿನ ದೇವರಶೀಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ತೆರಿಗೆ ವಸೂಲಾತಿ ಕ್ರಮ, ನಾಗರಿಕರ ಪ್ರತಿಕ್ರಿಯೆ ಹಾಗೂ ಅಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಸ್ಥಳದಲ್ಲಿಯೇ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೆರಿಗೆ ವಸೂಲಾತಿ ಕೇವಲ ಸರ್ಕಾರದ ಆದಾಯ ಹೆಚ್ಚಿಸಲು ಮಾತ್ರವಲ್ಲ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಸಾರ್ವಜನಿಕ ಸೌಲಭ್ಯಗಳ ಸುಧಾರಣೆ ಮತ್ತು ಜನಸೇವಾ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗಾಗಿ ಅತ್ಯಂತ ಅವಶ್ಯಕ ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ನಾಗರಿಕ ಕರ್ತವ್ಯವನ್ನು ಮನಗಂಡು ಬಾಕಿ ತೆರಿಗೆಗಳನ್ನು ಸಮಯಕ್ಕೆ ಪಾವತಿಸುವ ಮೂಲಕ ಆಡಳಿತಕ್ಕೆ ಸಹಕರಿಸಬೇಕು ಎಂದು ಕೋರಿದರು. ತೆರಿಗೆ ವಸೂಲಾತಿ ಅಭಿಯಾನವನ್ನು ಪಾರದರ್ಶಕವಾಗಿ, ಜನಸ್ನೇಹಿ ರೀತಿಯಲ್ಲಿ ಕೈಗೊಳ್ಳಬೇಕು, ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಕಿತ್ತೂರ ತಾಲೂಕಿನ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.
ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿರುವ ಗ್ರಾಮ ಪಂಚಾಯತಿಗಳನ್ನು ಮಾದರಿಯಾಗಿ ರೂಪಿಸಿ, ಹಿಂದುಳಿದ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ ಬಾಕಿ ತೆರಿಗ ವಸೂಲಾತಿಗೆ ಕಠಿಣ ಕ್ರಮ ಅಗತ್ಯವಿದೆ ಎಂದರು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ತೆರಿಗೆಗಳ ಮಹತ್ವ ತಿಳಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಉಪ ಕಾರ್ಯದರ್ಶಿಗಳು (ಅಭಿವೃದ್ಧಿ) ಶ್ರೀ ಬಸವರಾಜ ಅಡವಿಮಠ, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ನಿಂಗಪ್ಪ ಮಸಳಿ, ಜಿಪಂ ಬೆಳಗಾವಿಯ ಸಹಾಯಕ ನಿರ್ದೇಶಕರು ಶ್ರೀ ಚಂದ್ರಶೇಖರ ಬಾರ್ಕಿ, 
ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಮಹಮ್ಮದ್ ಗೌಸ್ ರಿಸಲ್ದಾರ್, ಸಹಾಯಕ ನಿರ್ದೇಶಕರು (ಪಂ.ರಾ) ಶ್ರೀ ವಿಜಯ ಪಾಟೀಲ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಬಡಿಗೇರ, ಉಪಾಧ್ಯಕ್ಷೆ ಶ್ರೀಮತಿ ವಿಜಯಾ ಹಂಚಿನಮನಿ, ತಾಪಂ ಸಿಬ್ಬಂದಿ ಸಂಗನಗೌಡ ಹಂದ್ರಾಳ, ಪಿಡಿಓ ವಿನಯಕುಮಾರ ಕೊರವಿ, ಕಾರ್ಯದರ್ಶಿ ಮಡಿವಾಳಪ್ಪ ಕಲಭಾಂವಿ, ಸರ್ವೇ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Post a Comment

0 Comments