kittur vijay news.ನಿಯಮ ಉಲ್ಲಂಘಿಸಿ ಶಾಲಾ ವಾಹನ ಚಲಾಯಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಮನವಿ.

ನಿಯಮ ಉಲ್ಲಂಘಿಸಿ ಶಾಲಾ ವಾಹನ ಚಲಾಯಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಮನವಿ. 

ಚ, ಕಿತ್ತೂರು: ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಶಾಲಾವಾಹನಗಳನ್ನು ಚಲಾಯಿಸುತ್ತಿರುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯುವ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. 

ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ, ವೈ, ತುಬಾಕಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕಿತ್ತೂರು ಯುವ ರಕ್ಷಣಾ ವೇದಿಕೆ ಅಧ್ಯಕ್ಷ ಕಿರಣ ವಾಳದ, ಇತ್ತೀಚಿನ ದಿನಗಳಲ್ಲಿ ಈ ರೀತಿಯ ವಾಹನ ಚಾಲನೆ ಹಲವಾರು ಶಾಲಾ ವಾಹನ ಚಾಲಕರಿಂದ ಕಂಡುಬರುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. 
ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು, ವೇಗದ ಮಿತಿಮೀರುವುದು,ವಾಹನದಲ್ಲಿ ಸಿ, ಸಿ, ಕ್ಯಾಮೆರಾ ಅಳವಡಿಸದೇ ಇರುವುದು, ವಿದ್ಯಾರ್ಥಿನಿಯರ ವಾಹನದಲ್ಲಿ ಮಹಿಳಾ ಸಹಾಯಕಿ ಇಲ್ಲದೇ ಇರುವುದು ಮುಂತಾದವುಗಳ ಕುರಿತು ಗಮನಹರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ರಕ್ಷಣಾ ವೇದಿಕೆಯ ಹಲವಾರು ಸದಸ್ಯರು ಉಪಸ್ಥಿತರಿದ್ದರು.

Post a Comment

0 Comments