ಚನ್ನಮ್ಮನ ಕಿತ್ತೂರು: ತಾಲೂಕಿನ ಹಿರೇನಂದಿಹಳ್ಳಿ ವ್ಯಾಪ್ತಿಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ.
ಕಿತ್ತೂರಿನಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯದಲ್ಲಿರುವ ಗೋವಿನ ಜೋಳದ ಹೊಲವೊಂದರಲ್ಲಿ ಈ ಘಟನೆ ನಡೆದಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಸರಿಸುಮಾರು ಐದಾರು ದಿನಗಳ ಹಿಂದೆಯೇ ಈ ವ್ಯಕ್ತಿಯನ್ನು ಕೊಲೆ ಮಾಡಿ ಇಲ್ಲಿ ಎಸೆದಿರಬಹುದು ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಪ್ರವೀಣ ಗಂಗೊಳ ಹಾಗೂ ಜಿ.ಜಿ. ಹಂಪಣ್ಣವರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇವರೊಂದಿಗೆ ಬೆರಳಚ್ಚು ತಜ್ಞರು ಕೂಡ ಆಗಮಿಸಿ ಮಹತ್ವದ ಸುಳಿವುಗಳಿಗಾಗಿ ಹುಡುಕಾಟ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತನ ಗುರುತು ಪತ್ತೆ ಹಚ್ಚಲು ಹಾಗೂ ಆರೋಪಿಗಳ ಪತ್ತೆಗೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
0 Comments