ಸತತ 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ.ಅಲ್ಲದೇ ಯೋಗೇಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಅಪರಾಧಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಶಿಕ್ಷೆಯ ಪ್ರಮಾಣ ಪ್ರಕಟಿಸುವ ವಿಚಾರಣೆಯ ವೇಳೆ ಶಾಸಕ ವಿನಯ್ ಕುಲಕುಲಕರ್ಣಿ ನಾನು 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ನೋವು ಮಾಡಿಲ್ಲ. ನನಗೆ ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಮತ್ತು ನಾನು 3,500 ಹಸುಗಳನ್ನು ಸಾಕುತ್ತಿರುವ ಕೃಷಿಕ ಹಾಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು.
0 Comments